May 12, 2026
Tuesday, May 12, 2026
spot_img

WEATHER | ನೈರುತ್ಯ ಮಳೆಯ ಮಾರುತ ಚುರುಕು- ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರಲಿದ್ದು, ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !