ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಲ್ಲಿ ಹಾಡ ಹಗಲೇ ವಿದ್ಯಾರ್ಥಿನಿಯ ಭೀಕರ ಕೊಲೆಯಾಗಿದೆ. ವಿದ್ಯಾರ್ಥಿನಿಯ ಕತ್ತು ಕೊಯ್ದು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಈ ಒಂದು ಕೊಲೆ ನಡೆದಿದೆ. ಯುವತಿಯನ್ನು ಬೈಕ್ ನಲ್ಲಿ ಕರೆದು ತಂದ ದುಷ್ಕರ್ಮಿಗಳು ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಈಗಾಗಲೇ ಸ್ಥಳಕ್ಕೆ ಶ್ರೀರಾಮಪುರ ಪೋಲಿಸರು ಭೇಟಿ ನೀಡಿ ಪರಿಶೀಲನೆ ಕೂಡ ಮಾಡಿದ್ದಾರೆ. ವಿದ್ಯಾರ್ಥಿನಿ ಯಾರು? ಯಾವ ಕಾರಣಕ್ಕೆ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಕೊಲೆ ಮಾಡಿದ್ದಾರೆ ಎನ್ನುವುದರ ಕುರಿತು ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

