Monday, November 10, 2025

ದುಲ್ಕರ್ ಸಲ್ಮಾನ್ ನಿರ್ಮಾಣ ಸಂಸ್ಥೆ ಮೇಲೆ ಕಾಸ್ಟಿಂಗ್ ಕೌಚ್ ಆರೋಪ


ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದುಲ್ಕರ್‌ ಸಲ್ಮಾನ್ ನಿರ್ಮಾಣ ಸಂಸ್ಥೆ ಕಳೆದ ಕೆಲವು ವಾರಗಳಿಂದಲೂ ಸುದ್ದಿಯಲ್ಲಿದೆ. ‘ಲೋಕಃ’ ಸಿನಿಮಾ ನಿರ್ಮಾಣವನ್ನು ದುಲ್ಕರ್ ಅವರ ವೆಲ್​​ಫೈರ್ ಫಿಲಮ್ಸ್ ವತಿಯಿಂದ ನಿರ್ಮಾಣ ಮಾಡಲಾಗಿದ್ದು, ಕಡಿಮೆ ಬಜೆಟ್​​ನಲ್ಲಿ ಅತ್ಯುತ್ತಮ ಗುಣಮಟ್ಟದ ಸಿನಿಮಾ ಮಾಡಿರುವ ಬಗ್ಗೆ ಪ್ರಶಂಸೆ ವ್ಯಕ್ತವಾಗಿತ್ತು. ಆದರೆ ಈಗ ಅದೇ ನಿರ್ಮಾಣ ಸಂಸ್ಥೆ ವಿರುದ್ಧ ಯುವತಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪವನ್ನು ಮಾಡಿದ್ದಾರೆ. ಲೋಕಃ ಸಿನಿಮಾದ ಬಳಿಕ ದುಲ್ಕರ್ ಸಲ್ಮಾನ್ ಅವರಿಗೆ ಒಂದರ ಹಿಂದೊಂದು ಸಂಕಷ್ಟಗಳು ಎದುರಾಗುತ್ತಲೇ ಇವೆ.

ದುಲ್ಕರ್ ಸಲ್ಮಾನ್ ನಿರ್ಮಾಣ ಸಂಸ್ಥೆ ಹಾಗೂ ಮನೆಯ ಮೇಲೆ ಕೆಲ ದಿನಗಳ ಹಿಂದಷ್ಟೆ ಒಮ್ಮೆ ಕಸ್ಟಮ್ಸ್ ಅಧಿಕಾರಿಗಳು ಮತ್ತೊಮ್ಮೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಕಸ್ಟಮ್ಸ್ ಅಧಿಕಾರಿಗಳು ದುಲ್ಕರ್ ಅವರಿಗೆ ಸೇರಿದ ಕೆಲವು ಕಾರುಗಳನ್ನು ಜಪ್ತಿ ಮಾಡಿ ತೆಗೆದುಕೊಂಡು ಹೋಗಿದ್ದರು. ಈಗ ಅವರ ನಿರ್ಮಾಣ ಸಂಸ್ಥೆಯ ವಿರುದ್ಧ ಕಾಸ್ಟಿಂಗ್ ಕೌಚ್ ಆರೋಪ ಹೊರಿಸಲಾಗಿದೆ. ಆರೋಪಕ್ಕೆ ಪ್ರತಿಯಾಗಿ ಕ್ರಮವನ್ನೂ ಸಹ ದುಲ್ಕರ್ ಸಲ್ಮಾನ್ ಅವರ ನಿರ್ಮಾಣ ಸಂಸ್ಥೆ ಕೈಗೊಂಡಿದೆ.

ಯುವತಿಯೊಬ್ಬಾಕೆ ನೀಡಿರುವ ದೂರಿನಂತೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿರುವ ಧಿನಿಲ್ ಬಾಬು ಎಂಬಾತ ಯುವತಿಗೆ ಕರೆ ಮಾಡಿ, ತಾನು ದುಲ್ಕರ್ ಅವರ ವೆಲ್​​ಫೈರ್ ನಿರ್ಮಾಣ ಸಂಸ್ಥೆಗೆ ಸಂಬಂಧಿಸಿದ ವ್ಯಕ್ತಿಯಾಗಿದ್ದು ಸಂಸ್ಥೆ ನಿರ್ಮಾಣ ಮಾಡುತ್ತಿರುವ ಮುಂದಿನ ಸಿನಿಮಾನಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ, ವೇಫೇರರ್ ಪ್ರೊಡಕ್ಷನ್ ಹೌಸ್​ ಬಳಿ ಇರುವ ಮನೆಯೊಂದಕ್ಕೆ ಬರಲು ಹೇಳಿದ್ದಾನೆ. ಬಳಿಕ ಯುವತಿಯನ್ನು ಕೋಣೆಯೊಂದಕ್ಕೆ ಕರೆದುಕೊಂಡು ಹೋಗಿ ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ. ಹಲ್ಲೆ ಮಾಡಿದ್ದಾನೆ. ಯಾರಿಗಾದರೂ ವಿಷಯ ತಿಳಿಸಿದರೆ ಮಲಯಾಳಂ ಚಿತ್ರರಂಗದಲ್ಲಿ ಅವಕಾಶ ಸಿಗದಂತೆ ಮಾಡುವೆ ಎಂದು ಬೆದರಿಸಿದ್ದಾನೆ.

error: Content is protected !!