Saturday, October 18, 2025

ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್: ಹೊರಗೆ ಜಿಗಿದು ಪ್ರಯಾಣಿಕರು ಪಾರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್​​​ ಸಂಪೂರ್ಣ ಭಸ್ಮವಾಗಿದೆ.

ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಈ ಬಸ್‌ನ ಟೈರ್ ಬ್ಲಾಸ್ಟ್ ಆಗಿದೆ, ಈ ವೇಳೆ ಏಕಾಏಕಿ ಬಸ್​​ಗೆ ​​ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಬಸ್​​​ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ.

ಬಸ್​​​​ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಕೂಡಲೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಬಸ್ಸಿನಲ್ಲಿ ಹಬ್ಬಕ್ಕೆಂದು ಊರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಕೂಡ ಇದ್ದರು. ಇನ್ನು ಈ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಪ್ರಮಾಣಪತ್ರಗಳು ಮತ್ತು ದುಬಾರಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇನ್ನು ಈ ಘಟನೆಗೆ ಬಸ್​ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಬಸ್ಸಿನಲ್ಲಿ ಸುಟ್ಟ ವಾಸನೆ ಬರುತ್ತಿದೆ ಎಂದು ಹೇಳಿದ್ರು ಚಾಲಕ ಬಸ್ ನಿಲ್ಲಿಸಿಲ್ಲ ಎಂದು ಪ್ರಯಾಣಿಕರು ಹೇಳಿದ್ದಾರೆ.

error: Content is protected !!