Sunday, October 19, 2025

ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್: ಶಿಕ್ಷಕರ ಅರ್ಹತಾ ಪರೀಕ್ಷೆಗೆ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ (TET)ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ದೀಪಾವಳಿ ಹಬ್ಬಕ್ಕೆ ಶಿಕ್ಷಕರಾಗಲು ಬಯಸುವವರಿಗೆ ಸರ್ಕಾರ ಭರ್ಜರಿ ಉಡುಗೊರೆಯಾಗಿ ಈ ಘೋಷಣೆ ಬಂದಿದೆ.

ಇದೇ ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಡಿಸೆಂಬರ್ 7ರಂದು ನಡೆಸಲಾಗುವುದು, ಜೊತೆಗೆ ಫಲಿತಾಂಶವನ್ನು ಡಿಸೆಂಬರ್ 31ರಂದು ಪ್ರಕಟಿಸಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಸೇರಿದಂತೆ ರಾಜ್ಯದ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಿಇಟಿ ಪರೀಕ್ಷೆಯ ಮೂಲಕ ನೇಮಕಾತಿ ನಡೆಯಲಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅರ್ಹ ಅಭ್ಯರ್ಥಿಗಳು ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಸುವರ್ಣಾವಕಾಶ ಇದಾಗಿದೆ.

error: Content is protected !!