Monday, October 20, 2025

ಸಾಮಾಜಿಕ-ಆರ್ಥಿಕ ಸಮೀಕ್ಷೆಯಲ್ಲಿ ವಿಪಕ್ಷ ನಾಯಕ ಆರ್‌ ಅಶೋಕ್‌ ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರದ ಸಾಮಾಜಿಕ-ಆರ್ಥಿಕ ಸಮೀಕ್ಷೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಪಾಲ್ಗೊಂಡರು. ಶನಿವಾರ ಜಾಲಹಳ್ಳಿಯ ಅವರ ನಿವಾಸಕ್ಕೆ ಗಣತಿದಾರರು ಭೇಟಿ ನೀಡಿ, ಕುಟುಂಬ ಮತ್ತು ಸ್ವಂತ ವೈಯಕ್ತಿಕ ಮಾಹಿತಿಯನ್ನು ದಾಖಲಿಸಿಕೊಂಡಿದ್ದಾರೆ. ಕೆಲವು ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳಲಾಗಿಲ್ಲ ಎಂದು ವರದಿಯಾಗಿದೆ.

ಈ ಸಮೀಕ್ಷೆಯಲ್ಲಿ ಪಾಲ್ಗೊಂಡ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಶೋಕ್ ಬಹಿರಂಗಪಡಿಸಿಲ್ಲ. ಒಕ್ಕಲಿಗ ಸಮಾಜದ ಪ್ರಭಾವಿ ನಾಯಕರಾಗಿರುವ ಅಶೋಕ್‌ ಅವರು ಸಮಾಜ ಜಾತಿಗಣತಿ ವಿಚಾರದ ಬಗ್ಗೆ ಆಯೋಜಿಸಿದ್ದ ಸಭೆಯಲ್ಲಿ ಈ ಹಿಂದೆ ಭಾಗವಹಿಸಿದ್ದರು.

error: Content is protected !!