Tuesday, October 21, 2025

ಆರೆಸ್ಸೆಸ್ ನಿಷೇಧಿಸಿಲ್ಲ, ಜಗದೀಶ್ ಶೆಟ್ಟರ್ ಅವಧಿಯಲ್ಲಿ ಹೊರಡಿಸಿದ್ದ ಆದೇಶವನ್ನೇ ಹೊರಡಿಸಿದ್ದೇವೆ: ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 2013 ರಲ್ಲಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು.

ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು. ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದು ಹೇಳಿದ್ದಾರೆ.

error: Content is protected !!