ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಬ್ಬದ ಸಂಭ್ರಮ ಕ್ಷಣಾರ್ಧದಲ್ಲಿ ದುರಂತವಾಗಿ ಮಾರ್ಪಟ್ಟಿದೆ. ಮಹಾರಾಷ್ಟ್ರದ ಉಮ್ಮರ್ಗಾ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಬೀದರ್ ಮೂಲದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೀಪಾವಳಿ ಹಿನ್ನೆಲೆಯಲ್ಲಿ ಧಾರ್ಮಿಕ ದರ್ಶನಕ್ಕೆ ತೆರಳಿದ್ದ ಈ ಸ್ನೇಹಿತರ ಪ್ರಯಾಣ ದುರಂತ ಅಂತ್ಯ ಕಂಡಿದೆ.
ಮೃತರನ್ನು ಶಿವಕುಮಾರ್, ರತಿಕಾಂತ ಹಾಗೂ ಇನ್ನಿಬ್ಬರ ಹೆಸರು ತಿಳಿದುಬಂದಿಲ್ಲ. ಎಲ್ಲರೂ ಬೀದರ್ ತಾಲೂಕಿನ ಖಾಶೆಂಪೂರ್ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನೊಬ್ಬ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಉಮ್ಮರ್ಗಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಐವರು ಹುಲಜಂತಿಯ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ತೆರಳಿ, ಹಿಂದಿರುಗುವ ವೇಳೆ ಉಮ್ಮರ್ಗಾ ಬಳಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಬೆಳಗಿನ ಜಾವ ಸಂಭವಿಸಿದ ಈ ಅಪಘಾತದಲ್ಲಿ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.