ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿದಿದ್ದು, ಮಂಗಳವಾರ ಸಂಜೆಯ ಬಳಿಕ ಹಲವೆವೆ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗಿದೆ.
ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿ ಹಲವೆಡೆ ಇಂದು ಮಳೆಯಾಗಿದೆ. ಪುತ್ತೂರು, ಸುಳ್ಯದಲ್ಲಿ ತಲಾ 6 ಸೆಂಟಿಮೀಟರ್, ಬೆಳ್ತಂಗಡಿ, ತಿಪಟೂರುಗಳಲ್ಲಿ ತಲಾ 5 ಸೆಂಟಿಮೀಟರ್ ಮಳೆಯಾಗಿದೆ.
ಬರುವ ಶನಿವಾರದವರೆಗೂ ರಾಜ್ಯದ ಕರಾವಳಿಯ ಉದ್ದಕ್ಕೂ ತಾಸಿಗೆ 35 ರಿಂದ 45 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆ ಕಾಲ ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ಸಾಧ್ಯತೆ: ಶನಿವಾರದವರೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಕಟ್ಟಪ್ಪಣೆ

