Thursday, October 23, 2025

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಗುತ್ತಿಗೆ ನೌಕರನಿಗೆ ‘ಗೇಟ್‌ಪಾಸ್’!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗೆ ಬಸವಕಲ್ಯಾಣದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯೊಬ್ಬರನ್ನು ಕೆಲಸದಿಂದ ವಜಾಗೊಳಿಸಿದ ಘಟನೆ ವರದಿಯಾಗಿದೆ. ಸರ್ಕಾರದಿಂದ ವೇತನ ಪಡೆಯುವ ನೌಕರರು ಯಾವುದೇ ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು ಎಂಬ ನಿಯಮದ ಉಲ್ಲಂಘನೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬಸವಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮೋದ್ ಅಶೋಕ ಕುಮಾರ್ ಅವರನ್ನು ತಾಲೂಕು ಆಡಳಿತವು ಸೇವೆಯಿಂದ ಬಿಡುಗಡೆಗೊಳಿಸಿದೆ.

ತಾಲೂಕು ಆಡಳಿತ ನೀಡಿರುವ ಆದೇಶ ಪ್ರತಿಯಲ್ಲಿ, ಸರ್ಕಾರದಿಂದ ವೇತನ ಪಡೆಯುವವರು ಯಾವುದೇ ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲಿ ಭಾಗವಹಿಸಬಾರದು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಈ ಆದೇಶದ ಉಲ್ಲಂಘನೆಯ ಕಾರಣಕ್ಕೆ ಅಡುಗೆ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

error: Content is protected !!