ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮಂಗಳವಾರ ರಾತ್ರಿ ಮೂವರು ದುಷ್ಕರ್ಮಿಗಳ ಮಹಿಳೆ ವಾಸವಿದ್ದ ಬಾಡಿಗೆ ಮನೆಗೆ ನುಗ್ಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಬಗ್ಗೆ ಮಹಿಳೆ ದೂರು ನೀಡಿದ್ದಾರೆ.
ಆರೋಪಿಗಳು ಮದ್ಯಪಾನ ಮಾಡಿದ್ದರು ಎಂದು ಹೇಳಲಾಗಿದೆ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೂವರೂ ಆರೋಪಿಗಳು ನಾಪತ್ತೆಯಾಗಿದ್ದು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
SHOCKING | ಮನೆಗೇ ನುಗ್ಗಿ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು!

