October 16, 2026
Friday, October 16, 2026
spot_img

ಮುಂದಿನ 10 ದಿನಗಳ ಕಾಲ ವಿವಿಧೆಡೆ ಮುಂದುವರಿಯಲಿದೆ ಮಳೆಯಾರ್ಭಟ: 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ವಿವಿಧೆಡೆ ರಾತ್ರಿಯಿಂದ ಮಳೆಯಾಗುತ್ತಿದ್ದು, ಮುಂದಿನ 10 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಉಳಿದ 24 ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್​ ಅಲರ್ಟ್​ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ತಮಿಳುನಾಡು, ಪುದುಚೇರಿ, ಕಾರಕಲೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶ, ಕರಾವಳಿ ಕರ್ನಾಟಕ, ಅಂಡಮಾನ್- ನಿಕೋಬಾರ್, ಕೇರಳ, ಲಕ್ಷದ್ವೀಪ, ಒಡಿಶಾ ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

Must Read