Wednesday, October 29, 2025

ರಾಜಕೀಯ ಉತ್ತರಾಧಿಕಾರಿ ಬಗ್ಗೆ ನಾನು ಮಾತನಾಡಿಲ್ಲ: ಯತೀಂದ್ರ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಕೂಡ ನಂಬಿಕೆ ಇಟ್ಟುಕೊಂಡು ಹೋಗುತ್ತಿದ್ದಾರೆ. ಆ ರೀತಿ ಸೈದ್ಧಾಂತಿಕವಾಗಿ ರಾಜಕಾರಣ ಮಾಡುವವರನ್ನ ಲೀಡ್ ಮಾಡಲಿ ಅನ್ನೋ ಉದ್ದೇಶ ಇಟ್ಟುಕೊಂಡು ಹೇಳಿದ್ದೇನೆ. ರಾಜಕೀಯ ಉತ್ತರಾಧಿಕಾರಿ ಬಗ್ಗೆ ನಾನು ಮಾತನಾಡಿಲ್ಲ ಎಂದು ಎಂಎಲ್‌ಸಿ ಡಾ. ಯತೀಂದ್ರ ಸ್ಪಷ್ಟನೆ ನೀಡಿದ್ದಾರೆ.

ಮುಂದಿನ ರಾಜಕೀಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ‌ ಎಂಬ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಯತೀಂದ್ರ, 2028ರ ವಿಧಾನಸಭಾ ಚುನಾವಣೆಯಲ್ಲಿ ತಂದೆಯವರು ಸ್ಪರ್ಧಿಸಲ್ಲ ಅಂದಿದ್ದಾರೆ. ಅದು ಆದ ಮೇಲೆ ಜಾತ್ಯತೀತ ಸಿದ್ಧಾಂತ ಇಟ್ಟುಕೊಂಡ ಸಾಕಷ್ಟು ನಾಯಕರಿದ್ದಾರೆ. ಇವರೆಲ್ಲರನ್ನೂ ಸತೀಶ್ ಜಾರಕಿಹೊಳಿ‌ ಮುನ್ನಡೆಸಲಿ ಎಂದರು.

2028ರ ನಂತರ ಆ ರೀತಿ ಲೀಡ್ ಮಾಡೋರು ಬೇಕು. ಸೈದ್ಧಾಂತಿಕ ರಾಜಕಾರಣ ಮಾಡುವವರ ಪೈಕಿ ಸಚಿವ ಸತೀಶ್ ಸಹ ಒಬ್ಬರು. ಆ ರೀತಿ ಸಿದ್ಧಾಂತ ಇಟ್ಟುಕೊಂಡವರಿಗೆ ಸತೀಶ್ ಮಾರ್ಗದರ್ಶನ ಮಾಡಲಿ. ನಾಳೆಯೇ ಕೊನೆ ದಿನ ಅಲ್ಲ, 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಳಿರುವೆ ಎಂದಿದ್ದಾರೆ.

error: Content is protected !!