Wednesday, October 29, 2025

ಕೊಡಗಿನಲ್ಲಿ ಬಿಡುವಿಲ್ಲದ ವರ್ಷಧಾರೆ, ತಗ್ಗುಪ್ರದೇಶದ ಮನೆಗಳಿಗೆ ನೀರು

ಹೊಸದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಬುಧವಾರ ಸಂಜೆಯಿಂದ ಭಾರೀ ಮಳೆಯಾಗುತ್ತಿದೆ.
ಜಿಲ್ಲೆಯಲ್ಲಿ ಬುಧವಾರ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಆಗಾಗ ಹಗುರವಾದ ಮಳೆಯಾಗುತ್ತಿತ್ತು. ಆದರೆ ಸಂಜೆ ವೇಳೆಗೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯಲಾಂಭಿಸಿದ್ದು, ತಡ ರಾತ್ರಿವರೆಗೂ ಮಳೆ ಮುಂದುವರಿದಿದೆ.

ಕುಶಾಲನಗರದಲ್ಲಿ ಚರಂಡಿಯಲ್ಲಿ ನೀರು ಹರಿಯಲು ಜಾಗವಿಲ್ಲದೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕೆಲವು ಮನೆಗಳಿಗೆ ನೀರು ನುಗ್ಗಿದೆ. ಮತ್ತೊಂದೆಡೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಂಗಡಿಗಳಿಗೆ ನೀರು ನುಗ್ಗಿದೆ.

error: Content is protected !!