Tuesday, October 28, 2025

ಬೆಂಗಳೂರಿನಲ್ಲಿ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ.

ಇನ್ನಿಬ್ಬರು ಆರೋಪಿಗಳಿಗಾಗಿ ತಲಾಶ್ ಮುಂದುವರೆದಿದೆ. ಇಂಥ ಘಟನೆಯಿಂದ ಸುತ್ತ-ಮುತ್ತ ಪ್ರದೇಶದ ನಿವಾಸಿಗಳು ಗಾಬರಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಎಸ್ಪಿ ಸಿ.ಕೆ. ಬಾಬಾ, ನಿನ್ನೆ ರಾತ್ರಿ ಮಾದನಾಯಕನಹಳ್ಳಿ ಬಳಿ ಈ ಘಟನೆ ನಡೆದಿದೆ. ಅಲ್ಲಿ ಒಟ್ಟು ಮೂರು ಮನೆಗಳಿದ್ದು, ಎರಡು ಮತ್ತು ಮೂರನೇ ಮನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಕುಟುಂಬಗಳು ವಾಸವಾಗಿದ್ದವು. ಈ ವೇಳೆ ಐವರು ಪುರುಷರು ಅಲ್ಲಿಗೆ ಬಂದು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದಾರೆ.

ಐವರು ಆರೋಪಿಗಳು ರಾತ್ರೋರಾತ್ರಿ ಸಂತ್ರಸ್ತೆ ವಾಸವಿದ್ದ ಮನೆಗೆ ನುಗ್ಗಿದ್ದಾರೆ. ತಾವು ಪೀಣ್ಯ ಪೊಲೀಸರ ಇನ್ಫಾರ್ಮರ್ಸ್ಎಂದು ಹೇಳಿಕೊಂಡಿದ್ದಾರೆ. ನಿಮ್ಮ ಮನೆಯಲ್ಲಿ ಗಾಂಜಾ ಮತ್ತು ವೇಶ್ಯವಾಟಿಕೆ ನಡೆಸುತ್ತಿದ್ದೀರಾ ಎಂದು ಆರೋಪಿಸಿ ದಾಳಿ ನಡೆಸಿದ್ದಾರೆ.

ಗಂಗೊಂಡನಹಳ್ಳಿ ನಿವಾಸಿ ಮಾರೇಗೌಡ ಎಂಬುವವರ ಮನೆಯಲ್ಲಿ ಸಂತ್ರಸ್ತೆ ಮತ್ತು ಅವರ ಕುಟುಂಬ ಬಾಡಿಗೆಗೆ ವಾಸವಿದ್ದರು. ಏಕಾಏಕಿ ನುಗ್ಗಿದ ಗ್ಯಾಂಗ್, ಮಾರಕಾಸ್ತ್ರಗಳನ್ನು ತೋರಿಸಿ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ. ಸಂತ್ರಸ್ತೆಯ 14 ವರ್ಷದ ಮಗ ಹಾಗೂ ಅವರ ಸ್ನೇಹಿತೆಯ ಮೇಲೂ ಹಲ್ಲೆ ಮಾಡಲಾಗಿದೆ. ಅಷ್ಟೇ ಅಲ್ಲದೆ, ಮನೆಯಲ್ಲಿದ್ದ ಗಂಡಸರನ್ನು ಕಟ್ಟಿ ಹಾಕಿ ಥಳಿಸಿದ್ದಾರೆ.

error: Content is protected !!