ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ.
ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
WEATHER |ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ, ಎಲ್ಲ ರಾಜ್ಯಗಳಿಗೂ ಯೆಲ್ಲೋ ಅಲರ್ಟ್

