ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ಜಲಾಶಯವಾದ ಹಾರಂಗಿ ಮತ್ತೊಮ್ಮೆ ಭರ್ತಿಯಾಗಿ ಇತಿಹಾಸ ಸೃಷ್ಟಿಸಿದೆ.
ಕಳೆದ ಎರಡು ದಿನಗಳಿಂದ ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಜಲಾಶಯಕ್ಕೆ 8200 ಕ್ಯುಸೆಕ್ಸ್’ನಷ್ಟು ನೀರು ಹರಿದು ಬರುತ್ತಿದೆ.
ಇದರಿಂದಾಗಿ ಹಾರಂಗಿ ಜಲಾಶಯದ ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ ಅಕ್ಟೋಬರ್ ತಿಂಗಳಲ್ಲಿ ಜಲಾಶಯ ಭರ್ತಿಯಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ 5000 ಕ್ಯುಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಮತ್ತೊಮ್ಮೆ ಭರ್ತಿಯಾಗಿ ಇತಿಹಾಸ ಸೃಷ್ಟಿಸಿದ ಹಾರಂಗಿ

