Sunday, October 26, 2025

ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ : ಸೋಮಣ್ಣ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ನವದೆಹಲಿಯ ಸಂಸತ್ ಭವನದ ಆವರಣದ ಪ್ರೇರಣಾ ಸ್ಥಳದಲ್ಲಿ ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚೆನ್ನಮ್ಮನವರ 247ನೇ ಜಯಂತ್ಯೋತ್ಸವ ಮತ್ತು 201ನೇ ವಿಜಯೋತ್ಸವನ್ನು ಆಚರಿಸಲಾಗಿದೆ.

ಇನ್ನು ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿ ಪಡಿಸಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸಚಿವ ವಿ.ಸೋಮಣ್ಣ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿರುವ ಸಚಿವ ವಿ.ಸೋಮಣ್ಣ, ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿ ಪಡಿಸಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನೆರವು ಕೊಡಬೇಕು ಎಂದರು.

error: Content is protected !!