ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಿಟಿಷ್‌ರ ವಿರುದ್ಧ ಮೊಟ್ಟಮೊದಲ ಸ್ವಾತಂತ್ರ್ಯ ಕಹಳೆಯೂದಿ ೧೯೨೪ರಲ್ಲಿ ಬ್ರಿಟಿಷ್ ಅಧಿಕಾರಿ ಥ್ಯಾಕರೆಯನ್ನು ಹೊಡೆದುರುಳಿಸಿ ಗೆಲವು ಸಾಧಿಸಿದ ಐತಿಹಾಸಿಕ ಸ್ಮರಣಾರ್ಥ ಕಿತ್ತೂರಿನಲ್ಲಿ ಇಂದು ಕಿತ್ತೂರು ಉತ್ಸವಕ್ಕೆ ಸಡಗರ ಸಂಭ್ರಮದಿಂದ ಚಾಲನೆ ನೀಡಲಾಯಿತು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ವಿಜಯ ಜ್ಯೋತಿಯನ್ನು ಬರಮಾಡಿಕೊಂಡು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು.
ಜಾನಪದ ಕಲಾ ಮೇಳದ ಭವ್ಯ ಮೆರವಣಿಗೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷಣ್ ಉತ್ಸವದ ಧ್ವಜಾರೋಹಣ ನೆರವೇರಿಸಿದರು. ರಾಣಿ ಚನ್ನಮ್ಮನ ತವರೂರು ಬೆಳಗಾವಿ ಹೊರವಲಯದ ಕಾಕತಿ ಗ್ರಾಮದಲ್ಲಿ ಉತ್ಸವದ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ರಾಣಿ ಚೆನ್ನಮ್ಮನ ಮೂರ್ತಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ ಕಿತ್ತೂರಿನ ಮಾದರಿಯಲ್ಲಿ ಕಾಕತಿಯಲ್ಲಿ ವಿಜೃಂಭಣೆಯಿಂದ ಉತ್ಸವ ಮಾಡಲಾಗುವುದು ಎಂದು ತಿಳಿಸಿದರು. ಬಳ್ಳಾರಿ ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಿತು.
ಇದೆ ಸಂದರ್ಭ ವೀರ ವನಿತೆ ಕಿತ್ತೂರುರಾಣಿ ಚೆನ್ನಮ್ಮ ಅವರ 247ನೇ ಜಯಂತೋತ್ಸವ ಹಾಗೂ 201ನೇ ವಿಜಯೋತ್ಸವವನ್ನು ಇಂದು ದೆಹಲಿಯ ಸಂಸತ್ ಭವನದ ಆವರಣದಲ್ಲಿನ ಪ್ರೇರಣಾ ಸ್ಥಳದ ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಆಚರಿಸಲಾಯಿತು.

