ಹೊಸ ದಿಗಂತ ವರದಿ,ಕಾರವಾರ:
ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತವಾಗಿದ್ದು, ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸುತ್ತಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ , ಉತ್ತರ ಕನ್ನಡ ಜಿಲ್ಲೆಗೆ ಅಕ್ಟೋಬರ್ 23 ರಿಂದ ಅಕ್ಟೋಬರ್ 25 ರ ಬೆಳಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದ್ದು, ಈ ಅವಧಿಯಲ್ಲಿ ಸಾರ್ವಜನಿಕರು ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆಯಂತೆ, 45 ರಿಂದ 55 ಕೀಮೀ ವೇಗದಲ್ಲಿ ಸಮುದ್ರ ತೀರದಲ್ಲಿ ಗಾಳಿ ಬೀಸುವ ಸಾದ್ಯತೆಯ ಹಿನ್ನೆಲೆ, ಮಳೆಯ ಜೊತೆಗೆ ಗಾಳಿ ಕೂಡಾ 45-55 ಕಿ.ಮೀ ವೇಗದಿಂದ ಬೀಸುವ ಸಾಧ್ಯತೆಯಿರುವುದರಿಂದ ಅಪಾಯಕಾರಿ ಮರಗಳಿರುವ ಮನೆಗಳಲ್ಲಿಯ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಶಿಥಿಲವಾದ ಕಟ್ಟಡದಲ್ಲಿ ವಾಸಿಸುತ್ತಿರುವವರು ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು. ಸಣ್ಣ ಹಾಗೂ ಮಧ್ಯಮ ದೋಣಿಗಳು ಮೀನುಗಾರಿಕೆಗೆ ಇಳಿಯಬಾರದು. ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ,ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು, ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿದೆ.

 
                                    