ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ನೇಮಕ ಕುರಿತಂತೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಜಾರಕಿಹೊಳಿ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂದು ಕಾಂಗ್ರೆಸ್ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆ ಕುರಿತಂತೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, 2028 ರಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಮಂಡಿಸುತ್ತೇನೆ. ಆದರೆ ಈ ಬಗ್ಗೆ ಈಗ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 30 ತಿಂಗಳ ಬಳಿಕ ಅದು ಪಕ್ಷ, ಶಾಸಕರು ಮತ್ತು ರಾಜ್ಯದ ರಾಜಕೀಯ ಮನಸ್ಥಿತಿಯನ್ನು ಅವಲಂಬಿಸಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಾಧಿಕಾರಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ಸತೀಶ್ ಜಾರಕಿಹೊಳಿ

