ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದನ್ನು ತಡೆಯಲು ಸಿದ್ದರಾಮಯ್ಯ ಬಣ ಸಂಚು ರೂಪಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬಾರದು ಎಂಬ ಹಿನ್ನೆಲೆಯಲ್ಲಿ ಪುತ್ರನ ಮೂಲಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ನವೆಂಬರ್‌ನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ನವೆಂಬರ್ ತಿಂಗಳು ಕಾಂಗ್ರೆಸ್ ಪಕ್ಷದಲ್ಲಿ ಗಮನಾರ್ಹ ಬದಲಾವಣೆ: ಪ್ರತಿಪಕ್ಷ ನಾಯಕ ಆರ್. ಅಶೋಕ ಸ್ಪೋಟಕ ಭವಿಷ್ಯ!

