March 16, 2026
Monday, March 16, 2026
spot_img

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ: ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಸದಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತಿಳಿಸಿದರು.

ಈ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ಈ ಬಗ್ಗೆ ವಿಷಯ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಅವರಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ತಿಳಿಸಿದರು.

ಸಮನ್ವಯ ಸಮಿತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಬಿಜೆಪಿ ನಾಯಕರು ಬಂದು ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !