Saturday, October 25, 2025

ನೆಲಮಂಗಲ ಹೈವೇಯಲ್ಲಿ ಲಾರಿ- ಕಾರು ಮಧ್ಯೆ ಭೀಕರ ಅಪಘಾತ : ಇಬ್ಬರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಕಾರು ನಡುವೆ ಭೀಕರ ಅಪಘಾತ ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.

ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಮಾರುತಿ ಎರ್ಟಿಗಾ ಕಾರು ಬರುತ್ತಿತ್ತು. ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಶಿವಲಿಂಗ ಗೌಡ(60), ಪ್ರಮೀಳಾ (55) ಮೃತಪಟ್ಟಿದ್ದಾರೆ.

ಕಾರಿನಲ್ಲಿ ಕುಟುಂಬ ಸದಸ್ಯರು ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುತ್ತಿದ್ದರು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

error: Content is protected !!