May 11, 2026
Monday, May 11, 2026
spot_img

ನನ್‌ ಹುಳುಕು ಏನಿದ್ಯೋ ನೀನು ಬಿಚ್ಚಿಡು, ನಿನ್ನದು ನಾನು ಬಿಚ್ಚಿಡ್ತೇನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ನನ್ನ ಹುಳುಕು ಏನಿದ್ಯೋ ನೀನು ಬಿಚ್ಚಿಡು. ನಿನ್ನ ಹುಳುಕನ್ನು ನಾನು ಬಿಚ್ಚಿಡ್ತೀನಿ. ಅದಾದಮೇಲೆ ಜನರಿದ್ದಾರೆ. ಅವರೇ ತೀರ್ಮಾನ ಮಾಡ್ತಾರೆ ಎಂದು ಗರಂ ಆಗಿದ್ದಾರೆ.

ಶಿವಕುಮಾರ್ ಜೊತೆ ಮಾತನಾಡಲು ಆಗುತ್ತಾ, ಆ ಯೋಗ್ಯತೆ ಉಳಿಸಿಕೊಂಡಿದ್ದಾರಾ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾಧ್ಯಮದವರು ಕೇಳಿದಾಗ, ಕುಮಾರಸ್ವಾಮಿ ಬಳಿ ಸಾಕ್ಷಿಗುಡ್ಡೆ ಇದ್ದರೆ, ಜನಕ್ಕೆ, ರಾಜ್ಯಕ್ಕೆ ಒಳ್ಳೆಯದು ಮಾಡಿದ್ದರೆ ಅದನ್ನು ದಾಖಲೆ ಸಮೇತ ಬಂದು ಹೇಳಲಿ. ಜನ ಅವರಿಗೆ ಮತ ಕೊಟ್ಟು ದೊಡ್ಡ ಹುದ್ದೆ ನೀಡಿದ್ದಾರೆ. ಸಾರ್ವಜನಿಕವಾಗಿ ಬಂದು ಉತ್ತರ ನೀಡಲಿ. ಕೇವಲ ಸುಳ್ಳು ಆರೋಪ ಮಾಡುತ್ತಾ, ಬೇರೆಯವರಿಗೆ ಹೆದರಿಸುತ್ತಾ ಹೋಗುವುದಲ್ಲ.

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ. ಅವರು ಸಿಎಂ ಆಗಿದ್ದಾಗ ನಾನು ಸಾತನೂರಿಗೆ ಚರ್ಚೆಗೆ ಹೋಗಲಿಲ್ಲವೇ? ನಾನು ಏನು ಮಾಡಿದ್ದೇನೆ, ನನ್ನ ಹುಳುಕು ಏನಿದೆ ಎಂಬುದನ್ನು ನೀನು ಹೇಳು, ನಿನ್ನದು ಏನಿದೆ ಎಂದು ನಾನು ಹೇಳುತ್ತೇನೆ. ನಂತರ ಜನ ತೀರ್ಮಾನ ಮಾಡುತ್ತಾರೆ ಎಂದು ಸವಾಲು ಹಾಕಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !