ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರು ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳ ಸಮಸ್ಯೆಗೆ ರಾಯಚೂರು ಟ್ರಾಫಿಕ್ ಪೊಲೀಸರು ಪರಿಹಾರ ಕಂಡುಕೊಂಡಿದ್ದಾರೆ.
ನಗರ ಪಾಲಿಕೆ ಮಾಡಬೇಕಾದ ಈ ಕಾರ್ಯವನ್ನು ಟ್ರಾಫಿಕ್ ಪೊಲೀಸರು ತಾವೇ ಮುಂದೆ ನಿಂತು ಮಾಡಿದ್ದಾರೆ. ಟ್ರಾಫಿಕ್ ಪೊಲೀಸ್ ಠಾಣೆಯ ಪಿಎಸ್ಐ ಸಣ್ಣ ವೀರೇಶ್ ಅವರ ನೇತೃತ್ವದಲ್ಲಿ ಟ್ರಾಫಿಕ್ ಸಿಬ್ಬಂದಿಯು ಮಣ್ಣು ತರಿಸಿ, ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಗುಂಡಿಗಳನ್ನು ಮುಚ್ಚಿದ್ದಾರೆ.
ಇದರಿಂದ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ. ಈ ರಸ್ತೆ ಗುಂಡಿಗಳು ಅಪಘಾತಗಳಿಗೆ ಕಾರಣವಾಗುತ್ತಿದ್ದವು, ಆದರೆ ಪೊಲೀಸರ ಈ ಕಾರ್ಯವು ಅಪಾಯಗಳನ್ನು ತಪ್ಪಿಸಿದೆ. ಸಾರ್ವಜನಿಕರು ಟ್ರಾಫಿಕ್ ಪೊಲೀಸರ ಈ ಜನಪರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ರಾಫಿಕ್ ನಿಯಂತ್ರಣದ ಜೊತೆಗೆ ನಾಗರಿಕರ ಸುರಕ್ಷತೆ ಮತ್ತು ಸೌಕರ್ಯಕ್ಕೆ ಒತ್ತು ನೀಡಿದ ಪೊಲೀಸರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.
ಅಪಘಾತ ತಪ್ಪಿಸೋಕೆ ಸಿಂಪಲ್ & ಎಫೆಕ್ಟೀವ್ ಪ್ಲ್ಯಾನ್ ಮಾಡಿದ ಪೊಲೀಸ್ ಸಿಬ್ಬಂದಿ

