ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದಲ್ಲಿ ನಕ್ಸಲರ ದಾಳಿಗೆ ಮತ್ತೆರಡು ಅಮಾಯಕ ಜೀವಗಳು ಬಲಿಯಾಗಿವೆ.
ಬಿಜಾಪುರ ಜಿಲ್ಲೆಯಲ್ಲಿ ಬಸಗುದಾ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಾ ಕಂಕೇರ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಕ್ಸಲರು ದಾಳಿ ನಡೆಸಿ ಇಬ್ಬರು ಗ್ರಾಮಸ್ಥರನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, 25 ವರ್ಷದ ರವಿ ಕಟ್ಟಂ ಹಾಗೂ 38 ವರ್ಷದ ತಿರುಪತಿ ಸೋಧಿ ನಕ್ಸಲ್ ದಾಳಿಯಲ್ಲಿ ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ. ಇಬ್ಬರೂ ಕಂಕೇರಾ ಗ್ರಾಮದ ನಿವಾಸಿಗಳಾಗಿದ್ದು, ಅವರ ಮೇಲೆ ಹರಿತವಾದ ಆಯುಧದಿಂದ ದಾಳಿ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಈ ಘಟನೆಯ ಬಗ್ಗೆ ಅಕ್ಟೋಬರ್ 24ರ ರಾತ್ರಿ ಮಾಹಿತಿ ಲಭ್ಯವಾಗಿದ್ದು, ಈ ಕುರಿತು ಹೆಚ್ಚಿನ ತಿನಿಖೆ ನಡೆಸಲಾಗುತ್ತಿದೆ ಎಂದು ಬಿಜಾಪುರ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಜಿತೇಂದ್ರ ಯಾದವ್ ತಿಳಿಸಿದ್ದಾರೆ.

