ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಟನಲ್ ರೋಡ್ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ವಿರೋಧ ವ್ಯಕ್ತಪಡಿಸಿದ್ದು, ಡಿಸಿಎಂ ಅವರನ್ನು ಭೇಟಿ ಮಾಡಲು ಅವರ ಕಚೇರಿಗೆ ಸಮಯ ಕೇಳಿದ್ದೇನೆ. ಅರ್ಧ ಗಂಟೆ ಸಮಯ ಕೊಟ್ಟರೆ ಯಾಕೆ ಬೇಡ? ಎಂದು ವಿವರಿಸುತ್ತೇನೆ ಎಂದು ಹೇಳಿದ್ದಾರೆ.
ಈ ಯೋಜನೆಯ ಬಗ್ಗೆ ಡಿಸಿಎಂ ಅವರಿಗೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡಿಲ್ಲ ಅನಿಸುತ್ತೆ. ಈ ಯೋಜನೆಯಿಂದ ಸ್ಯಾಂಕಿ ಕೆರೆ, ಲಾಲ್ ಬಾಗ್ ಪ್ರದೇಶಕ್ಕೆ ಹಾನಿಯಾಗಲಿದೆ. ಮಾಡೇ ಮಾಡ್ತೀನಿ ಅಂತ ಜಿದ್ದಿಗೆ ಬೀಳೋದು ತಪ್ಪು. ಟನಲ್ ಯೋಜನೆ ಬೇಡ ಅಂತ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಲೇಖಕ, ನಟ ಪ್ರಕಾಶ್ ಬೆಳವಾಡಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ಮಂಗಳವಾರ ಬರಲಿದ್ದು, ನಾನೇ ವಾದ ಮಂಡಿಸಲಿದ್ದೇನೆ ಎಂದು ಹೇಳಿದರು.

