March 14, 2026
Saturday, March 14, 2026
spot_img

ಬೆಂಗಳೂರು ಕಾಲ್ತುಳಿತ ಕೇಸ್: ಅಮಾನತು ರದ್ದಾದ ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಲ್ವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ.

ಇದರ ಬೆನ್ನಲ್ಲೇ ಇದೀಗ ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.

ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಅವರನ್ನ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಎಡಿಜಿಪಿಯಾಗಿ ಸ್ಥಳ ನಿಯೋಜನೆ ಮಾಡಿದ್ದರೆ, ಇನ್ನೋರ್ವ ಐಪಿಎಸ್ ಶೇಖರ್‌.ಹೆಚ್‌.ಟಿ ಅವರನ್ನು ಗುಪ್ತಚರ ಇಲಾಖೆಯ ಎಸ್‌ಪಿ ಹುದ್ದೆ ನೀಡಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿತ್ತು. ಇದರಿಂದ ರಾಜ್ಯ ಸರ್ಕಾರ, ಅಂದಿನ ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್‌, ಡಿಸಿಪಿ ಶೇಖರ್ ಹೆಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ASI ಬಾಲಕೃಷ್ಣ ಹಾಗೂ ಇನ್ಸ್​ಪೆಕ್ಟರ್​ ಗಿರೀಶ್​ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ಏಕಾಏಕಿ ರಾಜ್ಯ ಸರ್ಕಾರ ಯುಟರ್ನ್ ಹೊಡೆದಿದ್ದು, ಪೊಲಿಸ್ ಅಧಿಕಾರಿಗಳ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿದೆ.

ಬಿ. ದಯಾನಂದ್​ ಅವರಿಗೆ ಬಹಳ ದೊಡ್ಡ ಜವಾಬ್ದಾರಿ ನೀಡಲಾಗಿದೆ. ಈ ಹಿಂದೆ ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದಾಗ ಇವರ ಮೇಲೆ ಮಹಾನಿರ್ದೇಶಕರು ಇದ್ದರು. ಆದ್ರೆ, ಈಗ ಅವರನ್ನು ಕಾರಾಗೃಹ ಮತ್ತು ಸುಧಾರಣಾ ಎಡಿಜಿಪಿಯಾಗಿ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !