Wednesday, October 29, 2025

ನೆಲಮಂಗಲದಲ್ಲಿ ಮತ್ತೆ ಗುಂಡಿನ ಸದ್ದು: ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಫೈರಿಂಗ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಇಸ್ಲಾಂಪುರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಸದ್ಯ ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

ಗ್ರಾಮ ಪಂಚಾಯಿತಿ ಸದಸ್ಯ ಸಲೀಂ, ಮನೆ ಬಳಿ ಮಾತಾಡುತ್ತ ನಿಂತಿದ್ದ ವೇಳೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆದರೆ ಗುರಿ ಮಿಸ್​ ಆಗುತ್ತಿದ್ದಂತೆ ಅಪರಿಚಿತರು ಎಸ್ಕೇಪ್ ಆಗಿದ್ದಾರೆ.

ಇತ್ತ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಕೈಗೆ ಗಾಯವಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಆಸ್ಪತ್ರೆ ಮುಂದೆ ಜನರು ಜಮಾಯಿಸಿದ್ದಾರೆ.

error: Content is protected !!