July 15, 2026
Wednesday, July 15, 2026
spot_img

ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಅತ್ಯಾ*ಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಪ್ರಕರಣವನ್ನ ಪೊಲೀಸರು ಜನಾಂಗೀಯ ಪ್ರೇರಿತ ಎಂದು ಹೇಳಿದ್ದಾರೆ.

ಬ್ರಿಟನ್‌ನ ವೆಸ್ಟ್‌ ಮಿಡ್‌ಲ್ಯಾಂಡ್ಸ್‌ನಲ್ಲಿ ಘಟನೆ ನಡೆದಿದ್ದು, ಆಕೆಯ ಜನಾಂಗೀನ ಗುರುತಿನ ಕಾರಣದಿಂದ ಕೃತ್ಯ ನಡೆದಿದೆ ಎಂದು ಶಂಕಿಸಿದ್ದಾರೆ. ಇದು ಯುವತಿ ಮೇಲೆ ನಡೆದ ಅತ್ಯಂತ ಭಯಾನಕ ದಾಳಿಯಾಗಿದೆ. ಕೃತ್ಯ ಎಸಗಿದ ಕಾಮುಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ತನಿಖೆಗೆ ತಂಡಗಳನ್ನು ರಚಿಸಿದ್ದು, ಶೀಘ್ರವೇ ಬಂಧಿಸಲಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರೋನನ್ ಟೈರರ್ ತಿಳಿಸಿದ್ದಾರೆ.

ಮಹಿಳೆಯೊಬ್ಬರು ದೌರ್ಜನ್ಯಕ್ಕೆ ಒಳಗಾಗಿ ರಸ್ತೆ ಮಧ್ಯೆ ಅಳುತ್ತಾ ಕುಳಿತಿದ್ದಾಳೆ ಅನ್ನೋ ವಿಷಯ ಪೊಲೀಸರಿಗೆ ಗೊತ್ತಾಯ್ತು. ಸುದ್ದಿ ತಿಳಿದ ಪೊಲೀಸರು ವಾಲ್ಸಾಲ್‌ನ ಪಾರ್ಕ್ ಹಾಲ್ ಪ್ರದೇಶಕ್ಕೆ ಹೋದಾಗ ಸಂತ್ರಸ್ತೆಯನ್ನ ಗುರುತಿಸಿದ್ದಾರೆ. ಸದ್ಯ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !