ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯ (ಪಿಎಂ ಕಿಸಾನ್) 10ನೇ ಕಂತಿನ 20,900 ಕೋಟಿ ರೂ.ವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು.
ಪಿಎಂ ಕಿಸಾನ್ ಯೋಜನೆಯಲ್ಲಿ ಅರ್ಹ ರೈತ ಕುಟುಂಬಗಳಿಗೆ ವರ್ಷಕ್ಕೆ 6ಸಾವಿರ ರೂ. ಗಳ ಆರ್ಥಿಕ ನೆರವು ಒದಗಿಸಲಾಗುತ್ತದೆ. ಮೂರು ಕಂತುಗಳಲ್ಲಿ 2 ಸಾವಿರ ರೂ. ಗಳಂತೆ ಪಾವತಿಸಲಾಗುತ್ತದೆ.
ಸುಮಾರು 351 ರೈತ ಉತ್ಪಾದಕ ಸಂಸ್ಥೆಗಳಿಗೆ (ಎಫ್‌ಪಿಒ) 14 ಕೋಟಿ ರೂ.ಗಿಂತ ಹೆಚ್ಚಿನ ಇಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದ್ದು, ಈ ಮೂಲಕ 1.24 ಲಕ್ಷಕ್ಕೂ ಹೆಚ್ಚು ರೈತರಿಗೆ ನೆರವಾಗಲಿದೆ.
ಈ ಸಂದರ್ಭದಲ್ಲಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾತನಾಡಿ, ಪಿಎಂ ಕಿಸಾನ್ ಯೋಜನೆಯಿಂದ 2022 ರ ಹೊಸ ವರ್ಷದ ಮೊದಲ ದಿನದಂದು ಸುಮಾರು 10.09 ಕೋಟಿ ಫಲಾನುಭವಿಗಳಿಗೆ ಸುಮಾರು 20,900 ಕೋಟಿ ರೂ. ರೈತರ ಆದಾಯವನ್ನು ದ್ವಿಗುಣಗೊಳಿಸಲು ಸಹಾಯ ಮಾಡಲಿದೆ ಎಂದರು.
2018ರಿಂದ ಪ್ರಾರಂಭವಾದ ಈ ಯೋಜನೆಯಿಂದ ಈಗಾಗಲೇ 1.8ಲಕ್ಷ ಕೋಟಿ ರೂ. ರೈತರ ಖಾತೆ ತಲುಪಿದೆ.