Monday, October 27, 2025

ಇದ್ದಕ್ಕಿದ್ದಂತೆಯೇ ದೆಹಲಿಗೆ ಹೊರಟ ಡಿಸಿಎಂ ಡಿಕೆ ಶಿವಕುಮಾರ್‌, ವಿಷಯ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಕಾಂಗ್ರೆಸ್​​​ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಜೋರಾಗುತ್ತಿರುವ ಸಂದರ್ಭದಲ್ಲೇ, ಹೈಕಮಾಂಡ್ ಭೇಟಿಗೆ ತೆರಳಲ್ಲ ಎನ್ನುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್ ಭಾನುವಾರ ರಾತ್ರಿ ದೆಹಲಿಗೆ ತೆರಳಿದ್ದಾರೆ.

ಅಲ್ಲಿ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅವರು ನ.11ರಂದು ಮತ್ತೆ ದೆಹಲಿಗೆ ತೆರಳಲಿದ್ದು, ರಾಹುಲ್ ಗಾಂಧಿ ಜತೆ ಪ್ರತ್ಯೇಕ ಮಾತುಕತೆಗೆ ಸಮಯ ಕೇಳಿದ್ದಾರೆ. ಆ ಭೇಟಿಯ ವೇಳೆ ಅವರು ಹಲವು ವಿಚಾರಗಳನ್ನು ಪ್ರಸ್ತಾಪಿಸಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ಅಧಿಕಾರ ಹಂಚಿಕೆ, ಮುಂದಿನ ರಾಜಕೀಯ ಭವಿಷ್ಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ನ.11ಕ್ಕೆ ಬಿಹಾರ ಚುನಾವಣೆ 2ನೇ ಹಂತದ ಮತದಾನ ಸಹ ಅಂತ್ಯವಾಗಲಿದೆ. ಅಲ್ಲಿವರೆಗೆ ಮೌನದಿಂದ ಇರಿ ಎಂದು ಬೆಂಬಲಿಗರಿಗೂ ಡಿಕೆ ಶಿವಕಮಾರ್ ಸೂಚಿಸಿದ್ದಾರೆ. ಹೀಗಾಗಿ ಡಿಕೆ ಶಿವಕಮಾರ್ ನವೆಂಬರ್ 11ರ ದೆಹಲಿ ಪ್ರವಾಸ ಕುತೂಹಲ ಮೂಡಿಸಿದೆ.

error: Content is protected !!