March 16, 2026
Monday, March 16, 2026
spot_img

ಕರೂರು ಕಾಲ್ತುಳಿತ: ರೆಸಾರ್ಟ್‌ನಲ್ಲಿ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ವಿಜಯ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರೂರ್ ಕಾಲ್ತುಳಿತ ನಡೆದು ಒಂದು ತಿಂಗಳ ನಂತರ, ನಟ, ಟಿವಿಕೆ ಮುಖ್ಯಸ್ಥ ವಿಜಯ್ ಅವರು ಸೋಮವಾರ ಚೆನ್ನೈ ಬಳಿಯ ಮಹಾಬಲಿಪುರಂನಲ್ಲಿರುವ ರೆಸಾರ್ಟ್‌ನಲ್ಲಿ ದುರಂತದಲ್ಲಿ ಮೃತಪಟ್ಟವರ ಕುಟುಂಬದವರನ್ನು ಭೇಟಿ ಮಾಡಿದರು ಎಂದು ಟಿವಿಕೆ ಮೂಲಗಳು ತಿಳಿಸಿವೆ.

ಕರೂರಿನಿಂದ ಒಟ್ಟು 37 ಕುಟುಂಬಗಳನ್ನು ರೆಸಾರ್ಟ್‌ಗೆ ಕರೆತರಲಾಗಿತ್ತು. ಅವರಿಗಾಗಿ ಪಕ್ಷ, ಸುಮಾರು 50 ಕೊಠಡಿಗಳನ್ನು ಕಾಯ್ದಿರಿಸಿತ್ತು ಎಂದು ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮೂಲಗಳು ತಿಳಿಸಿವೆ.

ಟಿವಿಕೆ ನಾಯಕ ಸಂತ್ರಸ್ತ ಕುಟುಂಬಸ್ಥರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದು, ಅವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಜಯ್ ಅವರು, ಸಂತ್ರಸ್ತ ಕುಟುಂಬಗಳಿಗೆ ಶಿಕ್ಷಣದ ಜೊತೆಗೆ ಆರ್ಥಿಕ ಸಹಾಯದ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !