Tuesday, October 28, 2025

ಸಿಜೆಐ ವಿರುದ್ಧ ಶೂ ಎಸೆತ: ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಮ ಕೈಬಿಟ್ಟ ಸುಪ್ರೀಂಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಕ್ಟೋಬರ್ 6 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸುಪ್ರೀಂಕೋರ್ಟ್ ಕೈಬಿಟ್ಟಿದೆ.

ಈ ಬಗ್ಗೆ ಒಲವು ಹೊಂದಿಲ್ಲ ಎಂದು ಭಾರತದ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಸ್ವತಃ ಸಿಜೆಐ ಅವರೇ ವಕೀಲರ ವಿರುದ್ಧ ಪ್ರಕ್ರಿಯೆ ಮುಂದುವರಿಯಲು ನಿರಾಕರಿಸಿದ್ದಾರೆ.

ಸಿಜೆಐ ಮೇಲೆ ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡುವುದರಿಂದ ಅನಗತ್ಯವಾಗಿ ಪ್ರಾಮುಖ್ಯತೆ ನೀಡಿದಂತಾಗಲಿದೆ ಎಂದು ನ್ಯಾಯಾಲಯವು ಅರ್ಜಿದಾರರಾದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಗೆ ತಿಳಿಸಿದೆ.

ಅಕ್ಟೋಬರ್ 6 ರಂದು ವಿಷ್ಣು ವಿಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿಚಾರಣೆ ವೇಳೆಯಲ್ಲಿ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯಲು ವಕೀಲ ರಾಕೇಶ್ ಕಿಶೋರ್ ಯತ್ನಿಸಿದ್ದರು.

error: Content is protected !!