ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಪ್ರಕರಣ ಕುರಿತಂತೆ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ ಇದೇ 31 ರೊಳಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸುವುದಾಗಿ ಎಸ್‌ಐಟಿ ತಿಳಿಸಿದೆ. ಸಮಗ್ರ ಹಾಗೂ ಅಂತಿಮ ವರದಿಯನ್ನು ಸಲ್ಲಿಸಲು ಎಸ್‌ಐಟಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಮತ್ತು ಟಿ.ಜಯಂತ್ ಅವರಿಗೆ ಎಸ್‌ಐಟಿ ನೋಟಿಸ್ ಜಾರಿ ಮಾಡಿದ್ದು, ಇಂದು ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಿದೆ.
BIG UPDATE | ಧರ್ಮಸ್ಥಳ ಪ್ರಕರಣದ ತನಿಖೆ ಬಹುತೇಕ ಮುಕ್ತಾಯ: ಅಕ್ಟೋಬರ್ 31ರ ಮುನ್ನವೇ ಎಸ್ ಐಟಿ ವರದಿ ಸಲ್ಲಿಕೆ?

