ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಅಪ್ ಸರ್ಕಾರ ವೀಕೆಂಡ್ ಕರ್ಫ್ಯೂ ಘೋಷಿಸಿದೆ. ಈ ಮೂಲಕ ವಾರಾಂತ್ಯದ ಎರಡು ದಿನಗಳು ಎಲ್ಲ ಚಟುವಟಿಕೆಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್,ದೆಹಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಪಾಸಿಟಿವಿಟಿ ದರ 8.5ಕ್ಕೆ ಏರಿಕೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಲಾಕ್ಡೌನ್ ಬದಲಾಗಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದರು.
ದೆಹಲಿ ಕೊರೋನಾ ಜೊತೆಯಲ್ಲಿ ಒಮಿಕ್ರಾನ್ ಪ್ರಕರಣಗಳೂ ಹೆಚ್ಚಾಗಿ ಪತ್ತೆಯಾಗುತ್ತಿದ್ದು, ತಜ್ಞರು ಕೂಡ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ. ಈ ಹಿನ್ನೆಲೆ ಜನರ ಸುರಕ್ಷತೆಗೆ ವಾರಾಂತ್ಯದ ಎರಡು ದಿನ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.