ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನವೆಂಬರ್ ಬಳಿಕ ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳಿದ್ದು ಎಂದು ಹೇಳಾಗುತ್ತಿದ್ದು, ಇದೇ ವಿಚಾರವಾಗಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆಯ ಅಗತ್ಯವಿದ್ರೆ ಬಿಹಾರ ಚುನಾವಣೆಯ ಬಳಿಕ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ತೀರ್ಮಾನ ಕೈಗೊಳ್ಳುವುದು ಹೈಕಮಾಂಡ್. ನಾವು ಇಲ್ಲಿ ಕುಳಿತುಕೊಂಡು ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ಅವಶ್ಯಕತೆ ಇದ್ದರೆ ಬಿಹಾರ ಚುನಾವಣೆ ನಂತರ ಹೈಕಮಾಂಡ್ನವರೇ ತೀರ್ಮಾನ ಮಾಡುತ್ತಾರೆ. ಪುನಾರಚನೆಯೋ?, ಎರಡೂವರೆ ವರ್ಷದ ನಂತರ ಅಧಿಕಾರ ಬದಲಾವಣೆಯೋ?, ಏನೇ ಇದ್ರೂ ಹೈಕಮಾಂಡ್ ತೀರ್ಮಾನ ಮಾಡಲಿದೆ. ನಾವು ಇಲ್ಲಿ ಮಾತಾಡೋದರಿಂದ ಗೊಂದಲ ಆಗುತ್ತೆ ಎಂದರು.
ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹೇಳೋದಕ್ಕೆ ನಮಗೆ ಸಾಮರ್ಥ್ಯ ಇಲ್ಲ. ಅವರು ನಮ್ಮ ನಾಯಕರು. ನಮ್ಮ ಅಧ್ಯಕ್ಷರು ಮತ್ತು ಸಮರ್ಥರು ಇದ್ದಾರೆ. ಅವರಿಗೆ ಅಷ್ಟೊಂದು ಸಾಮರ್ಥ್ಯ ಇದೆ. ಅವರು ಸಿಎಂ ಆಗುವ ಬಗ್ಗೆ ನಾವು ಹೇಳುವುದಕ್ಕಾಗುವುದಿಲ್ಲ. ಹೈಕಮಾಂಡ್ ತೀರ್ಮಾನ ಅಂತಿಮ ಆದಾಗ ನಾವು ಅದಕ್ಕೆ ಬದ್ಧರಾಗಿರುತ್ತೇವೆ ಎಂದರು.

