ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ವುಡ್ ನಟಿ ಶುಭಾ ಪೂಂಜಾ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ತಮ್ಮ ಕುಟುಂಬದವರು ಹಾಗೂ ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ಮಂಗಳೂರಿನಲ್ಲಿ ಶುಭ ವಿವಾಹ ನೆರವೇರಿದೆ.
ಮದುವೆಯ ಫೋಟೊಗಳು ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಕ್ಕೆ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ. ಜೋಡಿ ಯಾವಾಗಲೂ ಖುಷಿಯಾಗಿರಲಿ ಎಂದು ಹಾರೈಸಿದ್ದಾರೆ.