ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೊಂತಾ ಚಂಡಮಾರುತದ ಪ್ರಭಾವ ಕರ್ನಾಟಕ ರಾಜ್ಯದ ಮೇಲೆ ಕೂಡ ಆಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದ. ರಾಜ್ಯದಲ್ಲಿ ವರುಣಾರ್ಭಟ ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನು ರಾಜಧಾನಿ ಬೆಂಗಲೂರಿನಲ್ಲಿ ಬೆಳಗ್ಗೆಯಿಂದಲೇ ತೀವ್ರ ಚಳಿ ಇದ್ದು, ಕಚೇರಿಗಳಿಗೆ ಹೋಗುವವರು, ಮಕ್ಕಳು ಸ್ವೆಟರ್‌ನಲ್ಲಿ ಕಂಡುಬಂದಿದ್ದಾರೆ.
ಉಳಿದೆಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಶುರುಮಾಡಿದೆ. ಅದರಲ್ಲೂ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದಕ್ಕೆ ಕಾರಣ ಬಂಗಾಳ ಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತ.ಕರಾವಳಿ ಭಾಗದ ಜನರಿಗೆ ಇದೊಂದು ಮಹತ್ವದ ಮುನ್ನೆಚ್ಚರಿಕೆ.

