April 29, 2026
Wednesday, April 29, 2026
spot_img

ಪಶ್ಚಿಮ ಟರ್ಕಿಯಲ್ಲಿ ಪ್ರಬಲ ಭೂಕಂಪ: ಬೃಹತ್‌ ಕಟ್ಟಡಗಳು ಧರೆಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಶ್ಚಿಮ ಟರ್ಕಿಯ ಬಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪರಿಣಾಮ ಕಟ್ಟಡಗಳು ನೆಲಸಮಗೊಂಡಿವೆ.

ಭೂಕಂಪದಿಂದಾಗಿ ಮೂರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಭಯದಿಂದ ಮನೆಯಿಂದಾಚೆ ಓಡಿಹೋಗಿದ್ದಾರೆ. ಕಳೆದ ಬಾರಿ ಸಂಭವಿಸಿದ್ದ ಭೂಕಂಪದಿಂದಾಗಿ ದುರ್ಬಲಗೊಂಡಿದ್ದ ಮೂರು ಕಟ್ಟಡಗಳು ಹಾಗೂ ಎರಡು ಅಂತಸ್ತಿನ ಅಂಗಡಿ ನೆಲಸಮಗೊಂಡಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿ ಪ್ರಕಾರ, ಬಾಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ. ಸ್ಥಳೀಯ ಸಮಯ ರಾತ್ರಿ 10:48ರ ಸುಮಾರಿಗೆ ಸುಮಾರು 6 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !