ಕೊರೋನಾ ಸಂಕಷ್ಟದಲ್ಲಿದ್ದ ದೇಶವನ್ನು ಮೋದಿ ಸರ್ಕಾರ ರಕ್ಷಿಸಿದೆ: ಮಹೇಶ್ ಟೆಂಗಿನಕಾಯಿ

ಹೊಸದಿಗಂತ ವರದಿ, ಹುಬ್ಬಳ್ಳಿ:

ಕೊರೋನಾ ಸಂಕಷ್ಟದ ಸಮಯದಲ್ಲಿ ವಿಜ್ಞಾನಿಗಳ ವಿಶ್ವಾಸಕ್ಕೆ ತೆಗೆದುಕೊಂಡು ಸ್ವದೇಶಿ ಲಸಿಕೆ ಕಂಡು ಹಿಡಿದು ಇಡೀ ದೇಶದ ಜನತೆಗೆ ಉಚಿತವಾಗಿ ಒಂದು ವರ್ಷದಲ್ಲಿ 156 ಕೋಟಿ ಡೋಸ್ ಲಸಿಕೆ ನೀಡಿ ಮೋದಿ ಸರ್ಕಾರ ಹೊಸ ಅಧ್ಯಾಯ ಬರೆದಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದ ಪ್ರವಾಸ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಮಹಾಮಾರಿಯಿಂದ ಇಡೀ ವಿಶ್ವ ಸಂಕಷ್ಟದಲ್ಲಿ ಇದ್ದಾಗ ದೇಶವನ್ನು ರಕ್ಷಿಸುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದೆ ಎಂದರು.
ದೇಶದ ವಿಜ್ಞಾನಿಗಳ ಏಕೀಕೃತ ಪ್ರಯತ್ನದಿಂದ ಲಸಿಕೆ ಕಂಡು ಹಿಡಿದಿದ್ದು, ಉದ್ಯಮಿಗಳು, ಮುಂಚೂಣಿ ಮತ್ತು ಆರೋಗ್ಯ ಕಾರ್ಯಕರ್ತರು ಈ ಸಾಧನೆ ಕೈಜೋಡಿಸಿದ್ದಾರೆ. ಅವರೆಲ್ಲರಿಗೂ ಬಿಜೆಪಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.
ವಿಪ ಸದಸ್ಯ ಪ್ರದೀಪ ಶೆಟ್ಟರ, ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟ್ಕರ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ಹುಡಾ ಅಧ್ಯಕ್ಷ ನಾಗೇಶ ಕಲಬುರಗಿ, ವಕ್ತಾರ ರವಿ ನಾಯಕ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!