ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಸಿನಿರಂಗದಲ್ಲಿ ಈಗಾಗಲೇ ಹೆಸರು ಮಾಡಿರುವ ನಟ ವಿನೋದ್ ಪ್ರಭಾಕರ್ ಈಗ ನಿರ್ಮಾಪಕರಾಗುತ್ತಿದ್ದಾರೆ.
ಈಗಾಗಲೇ ಸಾಕಷ್ಟು ಸ್ಟಾರ್ ನಟರು ಈಗ ತೆರೆ ಹಿಂದೆ ಕೆಲಸ ಮಾಡೋಕೆ ಸಜ್ಜಾಗಿದ್ದಾರೆ. ಕ್ಲಾಸ್ ಹಾಗೂ ಮಾಸ್ ಹೀರೋ ಎಂದೇ ಹೆಸರು ಗಳಿಸಿರುವ ನಟ ವಿನೋದ್ ಪ್ರಭಾಕರ್ ಈಗ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ. ಇದಕ್ಕೆ ಟೈಗರ್ ಟಾಕೀಸ್ ಎಂದು ಹೆಸರಿಟ್ಟಿದ್ದಾರೆ.
ಈ ಟೈಗರ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ʼಲಂಕಾಸುರʼಚಿತ್ರ ನಿರ್ಮಾಣವಾಗುತ್ತಿದೆ. ಇದರ ಪ್ರಮುಖ ಪಾತ್ರದಲ್ಲಿ ವಿನೋದ್ ಪ್ರಭಾಕರ್ ಇರಲಿದ್ದು, ಡಿ. ಪ್ರಮೋದ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ.
ಈಗಾಗಲೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ತಂದೆ ಟೈಗರ್ ಪ್ರಭಾಕರ್ ಅವರ ನೆನಪಿನಲ್ಲಿ ಟೈಗರ್ ಟಾಕೀಸ್ ಹೆಸರಿನಲ್ಲಿ ಪ್ರೊಡಕ್ಷನ್ ಹೌಸ್ ಆರಂಭಿಸಲಾಗಿದೆ.