Wednesday, November 5, 2025

ಬಿಹಾರ ಚುನಾವಣಾ ಅಖಾಡಕ್ಕೆ ಇಳಿದ ಪ್ರಶಾಂತ್ ಕಿಶೋರ್ ಗೆ ಶಾಕ್: ಆಯೋಗದಿಂದ ನೊಟೀಸ್ ಜಾರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ಚುನಾವಣೆ ಕಣರಂಗೇರಿದ್ದು, ಈ ನಡುವೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೆಸರು ಬಿಹಾರ, ಪಶ್ಚಿಮ ಬಂಗಾಳ ಎರಡು ರಾಜ್ಯಗಳಲ್ಲೂ ಮತದಾರರ ಪಟ್ಟಿಯಲ್ಲಿ ಕಾಣಿಸಿಗೊಂಡಿದೆ.

ಇದೀಗಈ ವಿಷಯ ಬೆಳಕಿಗೆ ಬಂದ ನಂತರ ಜನ ಸುರಾಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಅವರಿಗೆ ಚುನಾವಣಾ ಆಯೋಗವು ಶೋಕಾಸ್ ನೊಟೀಸ್ ನೀಡಿದೆ.

ಬಿಹಾರದ ರೋಹ್ಟಾಸ್ ಜಿಲ್ಲೆಯ ಸಸಾರಾಮ್‌ನಲ್ಲಿ ಕಾರ್ಗಹರ್ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹೊರಡಿಸಿದ ನೊಟೀಸ್ ಪ್ರಕಾರ, ಪ್ರಶಾಂತ್ ಕಿಶೋರ್ ಅವರ ಹೆಸರು ಕಾರ್ಗಹರ್‌ನ ಪಾರ್ಟ್ 367 (ಮಿಡಲ್ ಸ್ಕೂಲ್, ಕೋನಾರ್, ಉತ್ತರ ವಿಭಾಗ) ಮತಗಟ್ಟೆ ಸಂಖ್ಯೆ 621ರಲ್ಲಿ EPIC (ಮತದಾರರ ಗುರುತಿನ ಚೀಟಿ) ಸಂಖ್ಯೆ 1013123718ನೊಂದಿಗೆ ಮತದಾರರ ಪಟ್ಟಿಯಲ್ಲಿತ್ತು. ಇದರ ಜೊತೆಗೆ ಅವರ ಹೆಸರು ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಸೇಂಟ್ ಹೆಲೆನ್ ಶಾಲೆ, ಬಿ ರಾಣಿಶಂಕರಿ ಲೇನ್‌ನಲ್ಲಿ ಮತದಾನ ಕೇಂದ್ರವಿದೆ.

ಕಾರ್ಗಹರ್ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಪ್ರಶಾಂತ್ ಕಿಶೋರ್ ಅವರಿಗೆ ಮೂರು ದಿನಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿದ್ದಾರೆ. ಅವರ ಹೆಸರು ಏಕಕಾಲದಲ್ಲಿ ಎರಡು ವಿಭಿನ್ನ ರಾಜ್ಯಗಳಲ್ಲಿ ಹೇಗೆ ನೋಂದಾಯಿಸಲ್ಪಟ್ಟಿದೆ ಎಂಬುದನ್ನು ಪ್ರಶಾಂತ್ ಕಿಶೋರ್ ವಿವರಿಸಬೇಕಾಗಿದೆ.

ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ 2021ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರಶಾಂತ್ ಕಿಶೋರ್ ಟಿಎಂಸಿಗೆ ರಾಜಕೀಯ ಸಲಹೆಗಾರರಾಗಿ ಕೆಲಸ ಮಾಡಿದ್ದರು. ಇದೀಗ ಬಿಹಾರ ಮತ್ತು ಬಂಗಾಳ ಎರಡೂ ಕಡೆ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

error: Content is protected !!