Wednesday, November 5, 2025

ಮೊಂಥಾ ಚಂಡಮಾರುತ ಅಬ್ಬರ: 100ಕ್ಕೂ ಅಧಿಕ ರೈಲು ಸಂಚಾರ ರದ್ದು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶ ಕರಾವಳಿಗೆ ಮೊಂಥಾ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆ ಭಾರತೀಯ ರೈಲ್ವೇ 100ಕ್ಕೂ ಅಧಿಕ ರೈಲುಗಳನ್ನು ರದ್ದುಗೊಳಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ, ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಭಾರತೀಯ ರೈಲ್ವೇ 100ಕ್ಕೂ ಅಧಿಕ ರೈಲು ಸೇವೆಗಳನ್ನು ರದ್ದುಗೊಳಿಸಿದೆ. ಜೊತೆಗೆ ಹಲವಾರು ರೈಲುಗಳ ಮಾರ್ಗದಲ್ಲಿಯೂ ಬದಲಾವಣೆ ಮಾಡಿದ್ದು, ಕೆಲವು ರೈಲುಗಳ ಸಮಯವನ್ನು ಮರುನಿಗದಿಪಡಿಸಿದೆ.

ಆಂಧ್ರಪ್ರದೇಶ ಕರಾವಳಿ ಪ್ರದೇಶಗಳಾದ ಕಾಕಿನಾಡ, ಭೀಮಾವರಂ, ವಿಜಯವಾಡ, ರಾಜಮಂಡ್ರಿ ಮತ್ತು ವಿಶಾಖಪಟ್ಟಣಂ ಕಡೆ ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆ ಭಾರತೀಯ ರೈಲ್ವೆ ಇಲಾಖೆಯು ರೈಲು ಸಂಚಾರವನ್ನು ರದ್ದುಗೊಳಿಸಿದೆ. ಜೊತೆಗೆ ಪ್ರಯಾಣಿಕರು ರೈಲು ನಿಲ್ದಾಣಕ್ಕೆ ತೆರಳುವ ಮುನ್ನ ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್, ಐಆರ್‌ಸಿಟಿಸಿ ಮೂಲಕ ಅಪ್‌ಡೇಟ್‌ಗಳನ್ನು ತಿಳಿದುಕೊಳ್ಳಿ ಹಾಗೂ ರದ್ದಾದ ಎಲ್ಲಾ ರೈಲುಗಳ ಪೂರ್ಣ ಮರುಪಾವತಿ ನೀಡಲಾಗುವುದು ಎಂದು ತಿಳಿಸಿದೆ.

error: Content is protected !!