ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಭಾಟಿಯಾ ಆಸ್ಪತ್ರೆ ಬಳಿ ಇರುವ 20 ಅಂತಸ್ತಿನ ಕಮಲಾ ಬಿಲ್ಡಿಂಗ್ ನಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದಾರೆ. ಈ ದುರಂತದಲ್ಲಿ ಏಳು ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಟಾರ್ಡಿಯೊ ಪ್ರದೇಶದಲ್ಲಿರುವ ಬಹುಮಹಡಿ ಕಟ್ಟಡದ ಮೇಲಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಒಟ್ಟು 13 ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಶ್ರಮಿಸುತ್ತಿದ್ದಾರೆ.
ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆಂಕಿ ಕಾಣಿಸಿಕೊಂಡ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.