ಹೊಸದಿಗಂತ ವರದಿ, ಕೊಡಗು:
ಕೊಡಗು-ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗವಾದ ಸಂಪಾಜೆ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ನೆಲ್ಲಿಕುಮೇರ್ ಪ್ರದೇಶದಲ್ಲಿ ದಾಳಿ ಮಾಡಿರುವ ಕಾಡಾನೆಗಳು ದೇವರ ಕಟ್ಟೆಗೆ ಹಾನಿ ಉಂಟು ಮಾಡಿವೆ.
ಸಂಪಾಜೆ ಗ್ರಾಮದ ನೆಲ್ಲಿಕುಮೇರ್ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ವ್ಯಾಪ್ತಿಗೆ ಒಳಪಟ್ಟ ಶ್ರೀ ಮಧುರೈ ವೀರನ್ ಸ್ವಾಮಿ ಕಟ್ಟೆಗೆ ಕಾಡಾನೆ ದಾಳಿಯಿಂದ ಹಾನಿಯಾಗಿದೆ. ಸುಮಾರು 50 ವರ್ಷಗಳ ಹಿಂದೆ ಈ ಕಟ್ಟೆಯನ್ನು ಸ್ಥಾಪಿಸಲಾಗಿದ್ದು, ಪೂಜೆ, ಪುನಸ್ಕಾರಗಳು ನಡೆಯುತ್ತಿತ್ತು.
ಸ್ಥಳಕ್ಕೆ ದೇವಸ್ಥಾನದ ಆಡಳಿತ ಮೊಕ್ತೇಸರ ಪಳನಿವೇಲು, ಅಧ್ಯಕ್ಷ ಜ್ಞಾನಶೀಲನ್ (ರಾಜು) ಸಂಪಾಜೆ ಗ್ರಾ.ಪಂ ಅಧ್ಯಕ್ಷ ಜಿ.ಕೆ.ಹಮೀದ್, ಸದಸ್ಯ ಎಸ್.ಕೆ.ಹನೀಫ್, ಗ್ರಾಮಸ್ಥ ವಿಶ್ವಾಸ್ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.
ಗ್ರಾ.ಪಂ.ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ