Tuesday, November 4, 2025

ರಫೇಲ್ ಯುದ್ಧ ವಿಮಾನದಲ್ಲಿ ಕುಳಿತು ಹಾರಾಟ ನಡೆಸಿದ ರಾಷ್ಟ್ರಪತಿ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು.

2023 ರಲ್ಲಿ, ರಾಷ್ಟ್ರಪತಿ ಮುರ್ಮು ಅವರು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30MKI ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಿದ್ದರು. ಬ್ರಹ್ಮಪುತ್ರ ನದಿ ಮತ್ತು ತೇಜ್‌ಪುರ ಕಣಿವೆಯ ಮೇಲೆ ಹಾರಾಟ ನಡೆಸಿದ್ದರು, ನಂತರ ಸುರಕ್ಷಿತವಾಗಿ ನೆಲೆಗೆ ಮರಳಿದ್ದರು.

ಈ ಬಾರಿ ಅಂಬಾಲಾ ವಾಯುನೆಲೆಯ ಸುತ್ತಲೂ ಅವರು ಹಾರಾಟ ನಡೆಸಲಿದ್ದಾರೆ. ಅವರು ಫೈಟರ್ ಪ್ಲೇಟ್ ಸೂಟ್ ಧರಿಸಿ ವಿಮಾನದಲ್ಲಿ ಕುಳಿತಿದ್ದು ಎಲ್ಲರ ಗಮನ ಸೆಳೆದಿತ್ತು. ಹರಿಯಾಣದ ಅಂಬಾಲಾ ವಾಯುಪಡೆ ನಿಲ್ದಾಣದಲ್ಲಿ ಅವರು ಹಾರಾಟ ನಡೆಸುವ ಮೂಲಕ ಐಎಎಫ್​ನ ಅತ್ಯಾಧುನಿಕ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ..

ರಾಷ್ಟ್ರಪತಿಗಳು ಅಕ್ಟೋಬರ್ 18 ರಂದು ಅಂಬಾಲಕ್ಕೆ ಭೇಟಿ ನೀಡಬೇಕಿತ್ತು, ಆದರೆ ಅನಿರೀಕ್ಷಿತ ಕಾರಣಗಳಿಂದಾಗಿ ಅವರ ಭೇಟಿ ಮುಂದೂಡಬೇಕಾಯಿತು. ಇಂದು ಅವರು ಭಾರತೀಯ ವಾಯುಪಡೆಯ ಅತ್ಯಂತ ಹಳೆಯ ನಿಲ್ದಾಣಗಳಲ್ಲಿ ಒಂದಾಗಿದೆ. ಇದು ಈಗ ರಫೇಲ್​ ಯುದ್ಧ ವಿಮಾನಗಳ ನೆಲೆಯಾಗಿದೆ.

ರಫೇಲ್ ಜೆಟ್ ಅನ್ನು 4.5ನೇ ಪೀಳಿಗೆಯ ಯುದ್ಧ ವಿಮಾನ ಎಂದು ಪರಿಗಣಿಸಲಾಗಿದೆ ಬಹು-ಪಾತ್ರ ಸಾಮರ್ಥ್ಯದೊಂದಿಗೆ ಸಾಟಿಯಿಲ್ಲದ ಶಸ್ತ್ರಾಸ್ತ್ರ ವ್ಯವಸ್ಥೆಗಳು ಮತ್ತು ಸಂವೇದಕಗಳಿಂದ ಶಸ್ತ್ರಸಜ್ಜಿತವಾಗಿದೆ. ಆಪರೇಷನ್ ಸಿಂಧೂರ್ ವೇಳೆ ಈ ಯುದ್ದ ವಿಮಾನವನ್ನು ಬಳಕೆ ಮಾಡಲಾಗಿತ್ತು.

ಫ್ರಾನ್ಸ್​​ನ ಡಸಾಲ್ಟ್​ ಕಂಪನಿಯಿಂದ ರಫೇಲ್​ ಫೈಟರ್​ ಜೆಟ್​ಗಳನ್ನು ಭಾರತ ಪಡೆದುಕೊಂಡಿದೆ. ಡಸಾಲ್ಟ್ ಕಂಪನಿಯು ಭಾರತೀಯ ನೌಕಾಪಡೆಗೆ ಇನ್ನೂ 26 ವಿಮಾನಗಳನ್ನು ನೀಡುವುದು ಬಾಕಿ ಇದೆ.

error: Content is protected !!