ಕ್ಯಾನ್‌ಬೆರಾದ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ಮೊದಲನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸುತ್ತಿವೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ, ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಎದುರಾಳಿ ಟೀಮ್ ಇಂಡಿಯಾಗೆ ಮೊದಲ ಬ್ಯಾಟಿಂಗ್‌ಗೆ ಆಹ್ವಾನ ನೀಡಿದೆ.
ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಆಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅಲ್ಲದೆ ಗಾಯದ ಕಾರಣ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರು ಆರಂಭಿಕ ಮೂರು ಪಂದ್ಯಗಳಿಂದ ಹೊರ ನಡೆದಿದ್ದಾರೆ.
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ
ಆಸ್ಟ್ರೇಲಿಯಾ:ಮಿಚೆಲ್ ಮಾರ್ಷ್(ನಾಯಕ), ಟ್ರಾವಿಸ್ ಹೆಡ್, ಜಾಶ್ ಇಂಗ್ಲಿಸ್(ವಿಕೆಟ್ ಕೀಪರ್), ಟಿಮ್ ಡೇವಿಡ್, ಮಿಚೆಲ್ ಓವನ್, ಮಾರ್ಕಸ್ ಸ್ಟೊಯ್ನಿಸ್, ಜಾಶ್ ಫಿಲಿಪ್, ಕ್ಸೇವಿಯರ್ ಬಾರ್ಟ್ಲೆಟ್, ನೇಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಜಾಶ್ ಹೇಝಲ್‌ವುಡ್

