ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಪಾನ್ ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ, ಲಿಬರಲ್ ಡೆಮಾಕ್ರಟಿಕ್ ಪಕ್ಷದ ಕಟ್ಟಾ ಸಂಪ್ರದಾಯವಾದಿ ಸನೆ ತಕೈಚಿ (64) ಅವರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದರು.
ಪ್ರಧಾನಿಯಾಗಿದ್ದ ಶಿಗೇರು ಇಶಿಬಾ ಅವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದರಿಂದಾಗಿ ತಕೈಚಿ (64) ಇತ್ತೀಚೆಗೆ ಜಪಾನ್‌ನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು.
‘ಜಪಾನ್ ಪ್ರಧಾನಿ ಸನೆ ತಕೈಚಿ ಅವರೊಂದಿಗೆ ಆತ್ಮೀಯ ಸಂಭಾಷಣೆ ನಡೆಸಿದೆ. ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಲಾಯಿತು. ಭಾರತ ಮತ್ತು ಜಪಾನ್ ನಡುವಿನ ವಿಶೇಷ ಕಾರ್ಯತಂತ್ರವನ್ನು ಬಲಪಡಿಸುವ ಬಗ್ಗೆ, ವಿಶೇಷವಾಗಿ ಆರ್ಥಿಕ ಭದ್ರತೆ, ರಕ್ಷಣಾ ಸಹಕಾರ ಮತ್ತು ಎರಡೂ ದೇಶಗಳ ನಡುವೆ ಕೌಶಲ್ಯಪೂರ್ಣ ಜನರ ಚಲನೆಯಂತಹ ಕ್ಷೇತ್ರಗಳ ಬಗ್ಗೆ ಮಾತನಾಡಿದ್ದೇವೆ’ ಎಂದು ಮೋದಿ X ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
‘ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ಭಾರತ-ಜಪಾನ್ ಸಂಬಂಧಗಳು ಬಲವಾಗಿರುತ್ತವೆ ಎಂದು ನಾವು ಒಪ್ಪಿಕೊಂಡಿದ್ದೇವೆ’ ಎಂದು ಮೋದಿ ಹೇಳಿದರು.

